ಡಿಎಂಕೆ–ಕಾಂಗ್ರೆಸ್ ಮೈತ್ರಿ: ತಮಿಳುನಾಡಿಗೆ ಕಾವೇರಿ ನೀರು ಉಚಿತ ಎಂದು ಕಾಲೆಳೆದ ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ಕಾಂಗ್ರೆಸ್‌ ಪಕ್ಷವು ಆಡಳಿತಾರೂಢ ಡಿಎಂಕೆ ನೇತೃತ್ವದ ಮೈತ್ರಿಕೂಟದೊಂದಿಗೆ ಕೈಜೋಡಿಸಿದೆ. ಡಿಎಂಕೆ –ಕಾಂಗ್ರೆಸ್ ಮೈತ್ರಿ ಕುರಿತು ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಘಟಕವು, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವ್ಯಂಗ್ಯ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ‘ಕಾವೇರಿ ನೀರು ಹಂಚಿಕೆ’ ವಿಚಾರಕ್ಕೆ ಹೋಲಿಸಿದೆ. ‘ಇಂಡಿಯಾ ಮೈತ್ರಿಕೂಟದ ಭಾಗವಾಗಿ ತಮಿಳುನಾಡಿಗೆ ಕಾವೇರಿ ನೀರು ಉಚಿತ-ಖಚಿತ-ನಿಶ್ಚಿತ. ಕನ್ನಡಿಗರಿಗೆ ಕಷ್ಟ-ನಷ್ಟ-ಸಂಕಟ ಎಲ್ಲಾ ಫ್ರೀ, ಫ್ರೀ, ಫ್ರೀ...’ ಎಂದು ಬಿಜೆಪಿ ಲೇವಡಿ ಮಾಡಿದೆ. ಡಿಎಂಕೆ ಪಕ್ಷವು ಮೈತ್ರಿ ಪಕ್ಷ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಒಂಬತ್ತು ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಒಂದು ಸ್ಥಾನ ಸೇರಿದಂತೆ 10 ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಡಿಎಂಕೆ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ತಮಿಳುನಾಡಿನ ಕಾಂಗ್ರೆಸ್ ಘಟಕದ ಅಧ್ಯಕ್ಷ ಸೆಲ್ವಪೆರುಂಥಗೈ ಅವರು ಸೀಟು ಹಂಚಿಕೆ ಒಪ್ಪಂದಕ್ಕೆ ಶನಿವಾರ ಸಹಿ ಹಾಕಿದ್ದಾರೆ. ಈ ವೇಳೆ ಎಐಸಿಸಿ ಮುಖಂಡರಾದ ಕೆ.ಸಿ. ವೇಣುಗೋಪಾಲ್ ಮತ್ತು ಅಜಯ್ ಕುಮಾರ್ ಹಾಜರಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ್ದ ವೇಣುಗೋಪಾಲ್‌, ಡಿಎಂಕೆ ನೇತೃತ್ವದ ಮೈತ್ರಿಕೂಟ ರಾಜ್ಯದ ಎಲ್ಲ 40 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರು. ತಮಿಳುನಾಡಿಗೆ ಕಾವೇರಿ ನೀರು ಉಚಿತ-ಖಚಿತ-ನಿಶ್ಚಿತ. ಕನ್ನಡಿಗರಿಗೆ ಕಷ್ಟ-ನಷ್ಟ-ಸಂಕಟ ಎಲ್ಲಾ ಫ್ರೀ, ಫ್ರೀ, ಫ್ರೀ..# ../DSGcDqDgB6 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.