ಹಿಮಾಚಲ ಪ್ರದೇಶ: ಕಾರ್ಯದರ್ಶಿ ಸ್ಥಾನದಿಂದ ಶರ್ಮಾ ವಜಾ ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಡ್ಡ ಮತದಾನ ಮಾಡಿದ್ದ ಆರು ಶಾಸಕರಲ್ಲಿ ಒಬ್ಬರಾದ ಸುಧೀರ್‌ ಶರ್ಮಾ ಅವರನ್ನು ಪಕ್ಷದ ಕಾರ್ಯದರ್ಶಿ ಸ್ಥಾನದಿಂದ ಕಾಂಗ್ರೆಸ್‌ ಬುಧವಾರ ವಜಾಗೊಳಿಸಿದೆ. ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ‘ಶರ್ಮಾ ಅವರನ್ನು ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚಿಸಿದ್ದಾರೆ’ ಎಂದು ತಿಳಿಸಿದರು. ವಿಪ್‌ ಉಲ್ಲಂಘಿಸಿದ ಆರೋಪದ ಮೇಲೆ ಶರ್ಮಾ ಅವರನ್ನು ಶಾಸಕ ಸ್ಥಾನದಿಂದ ಇತ್ತೀಚೆಗೆ ಅನರ್ಹಗೊಳಿಸಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.