ಸ್ಪೇನ್‌ ಪ್ರವಾಸಿ ಮೇಲೆ ಅತ್ಯಾಚಾರ: ಐವರು ಆರೋಪಿಗಳ ಬಂಧನ ನವದೆಹಲಿ: ಸ್ಪೇನ್‌ ಪ್ರವಾಸಿ ಮೇಲೆ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದರೊಂದಿಗೆ ಬಂಧಿತರ ಒಟ್ಟು ಸಂಖ್ಯೆ ಎಂಟಕ್ಕೇರಿದೆ. ಭಾರತ ಪ್ರವಾಸಕ್ಕೆ ಬಂದಿದ್ದ ಸ್ಪೇನ್‌ ದೇಶದ ಮಹಿಳೆ ಮೇಲೆ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಕಳೆದ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಪೊಲೀಸರು ಶನಿವಾರ ಮೂವರನ್ನು ಬಂಧಿಸಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.