ಕಲ್ಕತ್ತ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಮಂಗಳವಾರ ರಾಜೀನಾಮೆ: ಗಂಗೋಪಾಧ್ಯಾಯ ಕೋಲ್ಕತ್ತ: ರಾಜ್ಯದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದ್ದ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ತೀರ್ಪು ನೀಡಿದ್ದ ಕಲ್ಕತ್ತ ಹೈಕೋರ್ಟ್‌ ನ್ಯಾಯಮೂರ್ತಿ ಅಭಿಜಿತ್‌ ಗಂಗೋಪಾಧ್ಯಾಯ ಅವರು ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಈ ಬಗ್ಗೆ ಸ್ವತಃ ಮಾಹಿತಿ ನೀಡಿರುವ ಅವರು, ರಾಜಕೀಯ ಪ್ರವೇಶಿಸುವ ಕುರಿತ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದ್ದಾರೆ. ರಾಜೀನಾಮೆ ಸಲ್ಲಿಸಿದ ದಿನ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳದ ಸರ್ಕಾರಿ–ಅನುದಾನಿತ ಶಾಲೆಗಳ ಸಿಬ್ಬಂದಿ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎನ್ನಲಾದ ಪ್ರಕರಣಗಳ ತನಿಖೆ ನಡೆಸುವಂತೆ ಸಿಬಿಐ ಮತ್ತು ಇ.ಡಿ.ಗೆ ಗಂಗೋಪಾಧ್ಯಾಯ ಅವರು ಹಲವು ನಿರ್ದೇಶನಗಳನ್ನು ನೀಡಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.