ಬಿಜೆಪಿಗೆ ₹ 2,000 ದೇಣಿಗೆ ನೀಡಿದ ಪ್ರಧಾನಿ ಮೋದಿ ನವದೆಹಲಿ: ‘ವಿಕಸಿತ ಭಾರತ’ ನಿರ್ಮಾಣಕ್ಕಾಗಿ ಬಿಜೆಪಿ ಆರಂಭಿಸಿರುವ ಆಂದೋಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ₹2,000 ದೇಣಿಗೆ ನೀಡಿದರು. ದೇಶ ಕಟ್ಟುವ ಅಭಿಯಾನಕ್ಕೆ ದೇಣಿಗೆ ನೀಡಿ ಎಂದು ದೇಶವಾಸಿಗಳಿಗೆ ಕರೆ ನೀಡಿದರು. ಪ್ರಧಾನಿ ಮೋದಿ ಅವರ ಅಧಿಕೃತ ‘ಎಕ್ಸ್‌’ ಖಾತೆಯಲ್ಲಿ ರಶೀದಿಯನ್ನು ಹಂಚಿಕೊಳ್ಳಲಾಗಿದೆ. ‘ಬಿಜೆಪಿಗೆ ಮತ್ತು ವಿಕಸಿತ ಭಾರತ ನಿರ್ಮಾಣಕ್ಕೆ ಬೆಂಬಲವಾಗಿ ದೇಣಿಗೆ ನೀಡಲು ಸಂತಸವಾಗುತ್ತಿದೆ. ನಮೊ ಆ್ಯಪ್‌ ಮೂಲಕ ನೀವೂ ದೇಣಿಗೆ ನೀಡಿ’ ಎಂದು ಎಕ್ಸ್‌ನಲ್ಲಿ ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.