ಉತ್ತರ ಪ್ರದೇಶ: ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾದ 10ನೇ ತರಗತಿ ವಿದ್ಯಾರ್ಥಿ ಕೌಶಂಬಿ: ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಸರ್ಕಾರಿ ಶಾಲೆಯ ಹಾಸ್ಟೆಲ್‌ನಲ್ಲಿ 10 ನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಆದಿತ್ಯ ದಿವಾಕರ್‌ (15) ಎನ್ನುವ ವಿದ್ಯಾರ್ಥಿ ಗುರುವಾರ ರಾತ್ರಿ ಹಾಸ್ಟೆಲ್‌ ಕೋಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಸ್ಥಳೀಯ ಎಸ್‌ಎಚ್‌ಒ ಧೀರೇಂದ್ರ ಸಿಂಗ್‌ ತಿಳಿಸಿದ್ದಾರೆ. ಶಾಲೆಯ ಇತರ ವಿದ್ಯಾರ್ಥಿಗಳ ಪ್ರಕಾರ, ದಿವಾಕರ್ ಇತ್ತೀಚೆಗೆ ನಡೆದ ವಿಜ್ಞಾನ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿರಲಿಲ್ಲ, ಇದರಿಂದಾಗಿ ಆತ ಬೇಸರಗೊಂಡಿದ್ದ ಎಂದು ಹೇಳಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.