ಕೇರಳದ ಕಣ್ಣೂರಿನಲ್ಲಿ ಸ್ಫೋಟ: ಇಬ್ಬರಿಗೆ ಗಾಯ ಕಣ್ಣೂರು ( ಕೇರಳ): ಕಣ್ಣೂರು ಜಿಲ್ಲೆಯ ಪಾನೂರು ಬಳಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 'ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ' ಎಂದು ಪಾನೂರು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.