ಅರುಣಾಚಲ ಪ್ರದೇಶ: ಕಾಂಗ್ರೆಸ್‌, ಎನ್‌ಪಿಪಿಯ ನಾಲ್ವರು ಶಾಸಕರು ಬಿಜೆಪಿ ಸೇರ್ಪಡೆ ಇಟಾನಗರ: ಲೋಕಸಭೆ ಚುನಾವಣೆ ಬೆನ್ನಲೇ ಅರುಣಾಚಲ ಪ್ರದೇಶದಲ್ಲಿ ನಾಲ್ವರು ಶಾಸಕರು ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಪಿಪಿಯ ತಲಾ ಇಬ್ಬರು ಶಾಸಕರು ಬಿಜೆಪಿ ಸೇರಿದರು. ಈ ವೇಳೆ ಮುಖ್ಯಮಂತ್ರಿ ಖಂಡು ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿಯುರಾಮ್ ವಾಹ್ಗೆ ಇದ್ದರು. ಅರುಣಾಚಲ ವಿಧಾನಸಭೆಯು 60 ಸ್ಥಾನಗಳನ್ನು ಹೊಂದಿದೆ. ಮುಂದಿನ ದಿನಗಳಲ್ಲಿ ಇನ್ನು ಅನೇಕರು ಬಿಜೆಪಿ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.