ಮಹಾರಾಷ್ಟ್ರದಲ್ಲಿ ಅಗ್ನಿ ಅನಾಹುತ: 7 ಸಾವು ಮುಂಬೈ: ಮಹಾರಾಷ್ಟ್ರದ ಔರಂಗಬಾದ್‌ ಜಿಲ್ಲೆಯ ಛತ್ರಪತಿ ಸಂಭಾಜಿ ನಗರದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಏಳು ಜನರು ಮೃತಪಟ್ಟಿದ್ದಾರೆ. ಬೆಳಗ್ಗೆ 4 ಗಂಟೆ ಸುಮಾರಿಗೆ ಟೈಲರಿಂಗ್‌ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿ ಏಳು ಜನರು ಮೃತಪಟ್ಟಿದ್ದಾರೆ. ಎಂದು ಸಂಭಾಜಿ ನಗರದ ಪೊಲೀಸ್ ಅಧಿಕಾರಿ ಮನೋಜ್ ಲೋಹಿಯಾ ಮಾಹಿತಿ ನೀಡಿದ್ದಾರೆ. # | : , . . ../Uokb80upnP ಈ ದುರ್ಘಟನೆಯಲ್ಲಿ ಮೃತರನ್ನು ಹೊರತು ಪಡಿಸಿದರೆ ಬೇರೆ ಯಾರಿಗೂ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರಿಂದ ಮಾಹಿತಿ ಪಡೆದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಘಟನೆ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಮನೋಜ್ ಲೋಹಿಯಾ ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.