ಜಮ್ಮು ಮತ್ತು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಪಾತಕಿ ಹತ್ಯೆ ಜಮ್ಮು: ‘ಜಮ್ಮು ಮತ್ತು ಕಾಶ್ಮೀರದ ಕಠುವಾದ ಬಳಿ ಇರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಸಮೀಪ ನಡೆದ ಎನ್‌ಕೌಂಟರ್‌ನಲ್ಲಿ ಪಾತಿಕಿಯೊಬ್ಬನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ’ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ‘ವಾಸುದೇವ್‌ ಮೃತ ಪಾತಕಿ. ಈತ ರಾಮಗಢ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾಗಿದ್ದ ವ್ಯಕ್ತಿಯಾಗಿದ್ದ. ಖಚಿತ ಮಾಹಿತಿ ಮೇರೆಗೆ ಈತನನ್ನು ಬಂಧಿಸಲು ಪ್ರಯತ್ನಿಸಿದಾಗ ಗುಂಡಿನ ಚಕಮಕಿ ನಡೆಯಿತು’ ಎಂದು ಹೇಳಿದ್ದಾರೆ. ‘ಎನ್‌ಕೌಂಟರ್‌ ಸಂದರ್ಭದಲ್ಲಿ ತಲೆಗೆ ಗಾಯವಾಗಿದ್ದ ಎಸ್‌ಐ ದೀಪಕ್‌ ಶರ್ಮಾ ಎಂಬುವವರು ಆಸ್ಪತ್ತೆಯಲ್ಲಿ ಚಿಕಿತ್ಸೆ ಪಡೆಯುವಾಗ ಮೃತಪಟ್ಟಿದ್ದಾರೆ. ಮತ್ತೊಬ್ಬ ವಿಶೇಷ ಪೊಲೀಸ್‌ ಅಧಿಕಾರಿ ಅನಿಲ್‌ ಕುಮಾರ್‌ ಎಂಬುವವರೂ ಗಾಯಗೊಂಡಿದ್ದಾರೆ’ ಎಂದು ಅವರು ಮಾಹಿತಿ ನೀಡಿದ್ದಾರೆ. ‘ವಾಸುದೇವ್‌, ಕುಖ್ಯಾತ ಶುನೂ ಗುಂಪಿನ ನಾಯಕ. ಗುಂಡಿನ ಚಕಮಕಿ ವೇಳೆ ಈತನ ಸಹಚರನೊಬ್ಬ ಗಾಯಗೊಂಡಿದ್ದಾನೆ’ ಎಂದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.