ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಬಿಹಾರ ಬಿಜೆಪಿ ನಾಯಕ ಸುಶೀಲ್ ಮೋದಿ ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಬಿಹಾರದ ಬಿಜೆಪಿ ನಾಯಕ ಸುಶೀಲ್ ಕುಮಾರ್‌ ಮೋದಿ ಬುಧವಾರ ತಿಳಿಸಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಾಕಿದ್ದಾರೆ ಕಳೆದ 6 ತಿಂಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ. ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಿಳಿಸಿದ್ದೇನೆ ಎಂದು 72 ವರ್ಷದ ಸುಶೀಲ್ ಮೋದಿ ಹೇಳಿದ್ದಾರೆ. ಸುಶೀಲ್ ಮೋದಿ 2017ರಿಂದ ನವೆಂಬರ್ 2020ರವರೆಗೆ ಬಿಹಾರದ ಉಪ ಮುಖ್ಯಮಂತ್ರಿಯಾಗಿದ್ದರು. पिछले 6 माह से कैंसर से संघर्ष कर रहा हूँ । अब लगा कि लोगों को बताने का समय आ गया है । लोक सभा चुनाव में कुछ कर नहीं पाऊँगा । को सब कुछ बता दिया है । देश, बिहार और पार्टी का सदा आभार और सदैव समर्पित | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.