| ಮೋದಿಗೆ ಚಹಾ ಮಾಡಲು ಬರುತ್ತದೆಯೇ ಎಂಬುದೇ ಅನುಮಾನ: ಭಗವಂತ್ ಮಾನ್ ‘ಪ್ರಧಾನಿ ನರೇಂದ್ರ ಮೋದಿ, ಮೊದಲು ರೈಲು ನಿಲ್ದಾಣದಲ್ಲಿ ಚಹಾ ಮಾರುತ್ತಿದ್ದರು ಎನ್ನುತ್ತಾರೆ. ಆದರೆ, ಅವರಿಗೆ ಚಹಾ ಮಾಡಲು ಬರುತ್ತದೆಯೇ ಎಂಬುದರ ಬಗ್ಗೆಯೇ ನನಗೆ ಅನುಮಾನವಿದೆ’ ಎಂದು ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ವ್ಯಂಗ್ಯವಾಡಿದರು. ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಬಂಧನ ಖಂಡಿಸಿ, ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಿಕೂಟವು ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ‘ನೀವು ಕೇಜ್ರಿವಾಲ್‌ ಅವರನ್ನು ಬಂಧಿಸಬಹುದಷ್ಟೇ. ಅವರ ಚಿಂತನೆಗಳನ್ನು ಮತ್ತು ಮಹತ್ವಾಕಾಂಕ್ಷೆಯನ್ನು ಹಿಡಿದಿಡಲು ಸಾಧ್ಯವಿಲ್ಲ’ ಎಂದು ಹೇಳಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.