ದೆಹಲಿ | ಮನೆಗೆ ನುಗ್ಗಿ ಸಿಕ್ಕವರಿಗೆ ಪರಚಿದ ಚಿರತೆ: ಐವರಿಗೆ ಗಾಯ ನವದೆಹಲಿ: ದೆಹಲಿಯ ರೂಪ ನಗರ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಚಿರತೆಯೊಂದು ಮನೆಗೆ ನುಗ್ಗಿದ್ದು, ಐವರನ್ನು ಘಾಸಿಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 6.20 ರ ಸುಮಾರಿಗೆ ಘಟನೆ ನಡೆದಿದೆ. ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಅಧಿಕಾರಿಗಳು ಸ್ಥಳೀಯರ ಸಹಾಯದಿಂದ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ‌ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಅತುಲ್ ಗಾರ್ಗ್ ಹೇಳಿದ್ದಾರೆ. | ' , 5 : ://./EbH7OulTMV : (: ) ../7bJRdu08YH ಘಟನಾ ಸ್ಥಳಕ್ಕೆ ಪೊಲೀಸರು ಕೂಡ ಆಗಮಿಸಿದ್ದು, ಅರಣ್ಯ ಇಲಾಖೆಗೂ ಮಾಹಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.