ಲೋಕಸಭಾ ಚುನಾವಣೆ: ಎರಡನೇ ಹಂತ- ಕಣದಲ್ಲಿ 1,210 ಅಭ್ಯರ್ಥಿಗಳು ನವದೆಹಲಿ: ಏಪ್ರಿಲ್‌ 26ರಂದು ಮತದಾನ ನಡೆಯಲಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ 1,210 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ 500 ಮಂದಿ ನಾಮಪತ್ರ ಸಲ್ಲಿಸಿದ್ದು, ಕರ್ನಾಟಕದ 14 ಕ್ಷೇತ್ರಗಳಿಗೆ 491 ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ವಿವರಿಸಿದ್ದಾರೆ. ಎರಡನೇ ಹಂತದಲ್ಲಿ 12 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ ಒಟ್ಟು 2,633 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 1,428 ನಾಮಪತ್ರಗಳು ಸ್ವೀಕೃತವಾಗಿದ್ದವು. ಇದರಲ್ಲಿ ಕೆಲವರು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ ಎಂದು ಹೇಳಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.