ಬಿಜೆಪಿ: 10ನೇ ಪಟ್ಟಿ ಬಿಡುಗಡೆ ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ 10ನೇ ಪಟ್ಟಿಯನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದೆ. ಮಾಜಿ ಪ್ರಧಾನಿ ಚಂದ್ರಶೇಖರ್‌ ಅವರ ಪುತ್ರ ನೀರಜ್‌ ಶೇಖರ್‌ ಅವರನ್ನು ಉತ್ತರ ಪ್ರದೇಶದ ಬಲಿಯಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ಎಸ್‌.ಎಸ್‌. ಅಹ್ಲುವಾಲಿಯ ಅವರನ್ನು ಅಭ್ಯರ್ಥಿಯನ್ನಾಗಿಸಿದೆ. ಅಹ್ಲುವಾಲಿಯ ಅವರು ಬರ್ಧಮಾನ್-ದುರ್ಗಾಪುರ ಕ್ಷೇತ್ರದ ಸಂಸದರಾಗಿದ್ದಾರೆ. ಹತ್ತನೇ ಪಟ್ಟಿಯಲ್ಲಿ ಉತ್ತರ ಪ್ರದೇಶದ ಏಳು ಕ್ಷೇತ್ರಗಳಿಗೆ, ಪಶ್ಚಿಮ ಬಂಗಾಳ ಮತ್ತು ಚಂಡೀಗಢದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಉತ್ತರ ಪ್ರದೇಶದ ಗಾಜಿಪುರ ಕ್ಷೇತ್ರದಿಂದ ಪಾರಸ್‌ನಾಥ್‌ ರಾಯ್‌ ಅವರನ್ನು ಕಣಕ್ಕಿಳಿಸಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.