ಅಬಕಾರಿ ನೀತಿ ಪ್ರಕರಣ: ಸಮನ್ಸ್ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಲು ಬಂದ ಸಚಿವ ನವದೆಹಲಿ: ದೆಹಲಿ ಸಾರಿಗೆ ಸಚಿವ ಕೈಲಾಶ್‌ ಗೆಹಲೋತ್‌ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ಇ.ಡಿ) ಕಚೇರಿಗೆ ಬಂದಿದ್ದಾರೆ. ದೆಹಲಿ ಸರ್ಕಾರವು 'ಅಬಕಾರಿ ನೀತಿ' ಜಾರಿಗೆ ತಂದಿದ್ದ ಸಂದರ್ಭ ಹಣ ಅಕ್ರಮ ವರ್ಗಾವಣೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ವಿಚಾರಣೆಗೆ ಬರುವಂತೆ ಸಮನ್ಸ್‌ ನೀಡಿದ ಬೆನ್ನಲ್ಲೇ, ಗೆಹಲೋತ್‌ ಅವರು ಇ.ಡಿ ಕಚೇರಿ ತಲುಪಿದ್ದಾರೆ. ಆಮ್‌ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರನ್ನು, ಇದೇ ಪ್ರಕರಣ ಸಂಬಂಧ ಇ.ಡಿ ಫೆಬ್ರುವರಿ 21ರಂದು ಬಂಧಿಸಿದೆ. ವಿಚಾರಣೆಗೆ ಹಾಜರಾಗುವಂತೆ ಕಳುಹಿಸಿದ್ದ ಸಮನ್ಸ್‌ಗಳನ್ನು ಕೇಜ್ರಿವಾಲ್‌ ಪದೇ ಪದೇ ನಿರ್ಲಕ್ಷಿಸಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.