14ಕ್ಕೆ ಸಂವಿಧಾನ ಉಳಿಸಿ, ಸರ್ವಾಧಿಕಾರ ತೊಲಗಿಸಿ ದಿನ ಆಚರಣೆ: ಎಎಪಿ ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಸೂಚನೆಯಂತೆ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಜನ್ಮದಿನವಾದ ಏಪ್ರಿಲ್ 14ರಂದು ‘ಸಂವಿಧಾನ ಉಳಿಸಿ, ಸರ್ವಾಧಿಕಾರ ತೊಲಗಿಸಿ ದಿನ’ ಆಚರಿಸುವುದಾಗಿ ಎಎಪಿಯು ಬುಧವಾರ ಘೋಷಿಸಿದೆ. ‘ಬುಧವಾರ ತಿಹಾರ್‌ ಜೈಲಿನಲ್ಲಿ ಕೇಜ್ರಿವಾಲ್‌ ಅವರನ್ನು ಭೇಟಿಯಾದ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಪಕ್ಷದ ಸಭೆಯಲ್ಲಿ ಕೇಜ್ರಿವಾಲ್ ಸಂದೇಶವನ್ನು ತಿಳಿಸಿದ್ದಾರೆ’ ಎಂದು ಪಕ್ಷದ ನಾಯಕ ಗೋಪಾಲ್‌ ರೈ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ‘ಕೇಜ್ರಿವಾಲ್ ಅವರು ಜೈಲಿನಿಂದ ಕಳುಹಿಸಿರುವ ಮತ್ತೊಂದು ಸಂದೇಶದಲ್ಲಿ, ಎಎಪಿ ಶಾಸಕರು ಮತ್ತು ಕಾರ್ಯಕರ್ತರು ದೆಹಲಿ ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ’ ಎಂದು ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.