ದೆಹಲಿಯ ಶಾಸ್ತ್ರಿ ಪಾರ್ಕ್‌ನಲ್ಲಿ 22 ವರ್ಷದ ಯುವಕನ ಗುಂಡಿಕ್ಕಿ ಹತ್ಯೆ ನವದೆಹಲಿ: ದೆಹಲಿಯ ಶಾಸ್ತ್ರಿ ಪಾರ್ಕ್‌ನಲ್ಲಿ 22 ವರ್ಷದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಪೊಲೀಸ್ ಠಾಣೆಗೆ ಕರೆ ಬಂದಿದ್ದು, ಎಸ್‌ಎಚ್‌ಒ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ‘ಮೃತ ಯುವಕನನ್ನು ಮುಸ್ತಾಕಿಮ್ ಎಂದು ಗುರುತಿಸಲಾಗಿದೆ. ಅವರು ಚಾಂದಿನಿ ಚೌಕ್‌ನಲ್ಲಿ ಸೇಲ್ಸ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಎದೆಗೆ ಗುಂಡು ಹಾರಿಸಲಾಗಿದೆ. ಆತನನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ’ ಎಂದು ದೆಹಲಿ ಈಶಾನ್ಯ ಡಿಸಿಪಿ ಜಾಯ್ ಟಿರ್ಕಿ ‘ಪಿಟಿಐ’ಗೆ ತಿಳಿಸಿದ್ದಾರೆ. | ' 22-- . " 1 . 22--… ../Y3GSPgnNuN ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.