: ಗಯಾದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಮಾಜಿ ಸಿಎಂ ಜೀತನ್ ಮಾಂಝಿ ಕಣಕ್ಕೆ ಪಾಟ್ನಾ: ಗಯಾ ಲೋಕಸಭಾ ಕ್ಷೇತ್ರದಿಂದ ಬಿಹಾರದ ಮಾಜಿ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕಿಳಿಯಲಿದ್ದಾರೆ ಎಂದು ಹಿಂದೂಸ್ತಾನಿ ಅವಾಮ್ ಮೋರ್ಚಾ ಪ್ರಕಟಿಸಿದೆ. ಮಾಂಝಿ ಅವರ ಉಮೇದುವಾರಿಕೆಯನ್ನು ಅವರ ಪುತ್ರ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ರಾಜ್ಯ ಸಚಿವ ಸಂತೋಷ್ ಸುಮನ್ ಅನುಮೋದಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಈ ವಾರದ ಆರಂಭದಲ್ಲಿ ಎನ್‌ಡಿಎ ಬಿಹಾರದಲ್ಲಿ ಸೀಟು ಹಂಚಿಕೆ ಮಾಡಿದೆ. 17 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಿದರೆ, ಜೆಡಿಯು 16 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷಕ್ಕೆ (ರಾಮ್ ವಿಲಾಸ್) 5 ಸ್ಥಾನಗಳನ್ನು ನೀಡಲಾಗಿದೆ. ಮಾಂಝಿ ಅವರು ಗಯಾ ಜಿಲ್ಲೆಯ ಇಮಾಮ್‌ಗಂಜ್‌ನ ಶಾಸಕರಾಗಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.