ಸೋಲಾಪುರ: ಪ್ರಣತಿ ಶಿಂಧೆಗೆ ಕಾಂಗ್ರೆಸ್‌ ಟಿಕೆಟ್‌ ಸೋಲಾಪುರ(ಮಹಾರಾಷ್ಟ್ರ): ಸೋಲಾಪುರ ಎಸ್‌ಸಿ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ನಿರೀಕ್ಷೆಯಂತೆ ಪ್ರಣತಿ ಶಿಂಧೆ ಅವರಿಗೆ ಲಭಿಸಿದೆ. ಸೋಲಾಪುರ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರ ಹಾಲಿ ಶಾಸಕಿಯಾಗಿರುವ ಪ್ರಣತಿ ಶಿಂಧೆ (44 ವಯಸ್ಸು) ಟಿಕೆಟ್‌ಗಾಗಿ ಲಾಭಿ ನಡೆಸಿದ್ದರು. ಮೂರು ಬಾರಿ ಶಾಸಕಿಯಾಗಿ ಹಾಗೂ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಪ್ರಣತಿ ಅವರು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಗೃಹ ಸಚಿವ ಸುಶೀಲ್‌ ಕುಮಾರ್‌ ಶಿಂಧೆ ಅವರ ಪುತ್ರಿ. ಬಿಜೆಪಿ ಅಭ್ಯರ್ಥಿ ಯಾರೆಂಬುದು ಇನ್ನೂ ಅಂತಿಮವಾಗಿಲ್ಲ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.