‘ಮಹಾಘಟಬಂಧನ’ಕ್ಕೆ ವಿಐಪಿ ಸೇರ್ಪಡೆ ಪಟ್ನಾ: ಆರ್‌ಜೆಡಿ ನೇತೃತ್ವದ ‘ಮಹಾಘಟಬಂಧನಕ್ಕೆ’ ಸೇರ್ಪಡೆಗೊಳ್ಳುವುದಾಗಿ ಬಿಹಾರದ ಮಾಜಿ ಸಚಿವ ಹಾಗೂ ವಿಕಾಸ್‌ಶೀಲ್‌ ಇನ್ಸಾನ್‌ ಪಕ್ಷದ (ವಿಐಪಿ) ಮುಖ್ಯಸ್ಥ ಮುಕೇಶ್‌ ಸಹಾನಿ ಅವರು ಶುಕ್ರವಾರ ಘೋಷಿಸಿದರು. ಮೂರು ವರ್ಷಗಳ ಹಿಂದೆ ಅವರು ಮೈತ್ರಿಕೂಟ ತೊರೆದು ಬಿಜೆಪಿ ನೇತೃತ್ವದ ಎನ್‌ಡಿಎಗೆ ಸೇರಿದ್ದರು. ಬಿಹಾರದಲ್ಲಿ ‘ಇಂಡಿಯಾ’ ಕೂಟದ ಸೀಟು ಹಂಚಿಕೆ ಸೂತ್ರವನ್ನು ಈಗಾಗಲೇ ಪ್ರಕಟಿಸಲಾಗಿದೆ. ಆರ್‌ಜೆಡಿಯು 26 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ನಮ್ಮ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳನ್ನು ವಿಐಪಿ ಪಕ್ಷಕ್ಕೆ ಬಿಟ್ಟು ಕೊಡಲಾಗುವುದು ಎಂದು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.