ಲೋಕಸಭಾ ಚುನಾವಣೆ: 21 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಡಿಎಂಕೆ ಚೆನ್ನೈ: ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ ಆಡಳಿತಾರೂಢ ಡಿಎಂಕೆ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಹಾಲಿ ಸಂಸದರಾದ ಕನ್ನಿಮೊಳಿ, ಟಿ.ಆರ್‌.ಬಾಲು, ಆರ್‌. ರಾಜಾ ಅವರಿಗೆ ಮತ್ತೆ ಸ್ಪರ್ಧಿಸಲು ಡಿಎಂಕೆ ಅವಕಾಶ ನೀಡಿದೆ. ಉಳಿದ 18 ಸ್ಥಾನಗಳನ್ನು ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ಎಡಪಕ್ಷಗಳಿಗೆ ನೀಡಿದೆ. 21 ಅಭ್ಯರ್ಥಿಗಳ ಪೈಕಿ 11 ಹೊಸ ಮುಖಗಳಿಗೆ ಡಿಎಂಕೆ ಅವಕಾಶ ಕಲ್ಪಿಸಿದೆ. ಇದೇ ವೇಳೆ ಚುನಾವಣೆಗಾಗಿ ಡಿಎಂಕೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.