ತಮಿಳರಿಗೆ ಅವಮಾನ ಆರೋಪ: ಶೋಭಾ ವಿರುದ್ಧ ಚು. ಆಯೋಗಕ್ಕೆ ದೂರು ನೀಡಿದ ಡಿಎಂಕೆ ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ತಮಿಳುನಾಡು ಕಾರಣ ಎಂದು ಹೇಳಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. இரு மாநிலங்களுக்கு இடையே கலவரத்தை தூண்டும் வகையிலும், தமிழ்நாட்டு மக்களை இழிவுப்படுத்தியும் பேசிய ஒன்றிய அமைச்சர் ஷோபா மற்றும் பாஜக மீது நடவடிக்கை மேற்கொள்ளுமாறு இந்திய தேர்தல் ஆணையத்தில் கழக அமைப்புச் செயலாளர் திரு @ அவர்கள் புகார்! ../ ತಮಿಳುನಾಡು ಜನತೆಯನ್ನು ಅವಮಾನಿಸಿದ್ದಕ್ಕಾಗಿ ಹಾಗೂ ಎರಡು ರಾಜ್ಯಗಳ ನಡುವೆ ಗಲಭೆಗೆ ಪ್ರಚೋದನೆ ನೀಡಿದ್ದಕ್ಕಾಗಿ ಶೋಭಾ ಕರಂದ್ಲಾಜೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಎಂಕೆಯ ಆರ್‌.ಎಸ್‌ ಭಾರತಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ಬಗ್ಗೆ ಡಿಎಂಕೆ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.