ಅರುಣಾಚಲ: ಎನ್‌ಪಿಪಿಯಿಂದ ಮೊದಲ ಪಟ್ಟಿ ಬಿಡುಗಡೆ ಇಟಾನಗರ: ನ್ಯಾಷನಲಿಸ್ಟ್ ಪೀಪಲ್ಸ್ ಪಕ್ಷವು (ಎನ್‌ಪಿಪಿ) ಏಪ್ರಿಲ್ 19ರಂದು ನಡೆಯುವ ಅರುಣಾಚಲ ಪ್ರದೇಶದ ವಿಧಾನಸಭಾ ಚುನಾವಣೆಗಾಗಿ 29 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಅರುಣಾಚಲ ಪ್ರದೇಶವು 60 ವಿಧಾನಸಭಾ ಕ್ಷೇತ್ರ ಮತ್ತು 2 ಲೋಕಸಭಾ ಕ್ಷೇತ್ರಗಳನ್ನು ಹೊಂದಿದೆ. ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ನೇತೃತ್ವದ ಎನ್‌ಪಿಪಿಯು ಅರುಣಾಚಲ ಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹಾಕದೇ ಬಿಜೆಪಿಯನ್ನು ಬೆಂಬಲಿಸುತ್ತಿದ್ದು, ‘ಈಶಾನ್ಯ ಪ್ರಜಾಸತ್ತಾತ್ಮಕ ಮೈತ್ರಿಕೂಟ’ದ ಭಾಗವಾಗಿರುವುದನ್ನು ಖಚಿತಪಡಿಸಿದೆ. ಬಿಜೆಪಿ ಎಲ್ಲ ವಿಧಾನಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದರೆ, ಕಾಂಗ್ರೆಸ್ 34 ಅಭ್ಯರ್ಥಿಗಳನ್ನು ಘೋಷಿಸಿದೆ. ಎನ್‌ಸಿಪಿ 17 ಮತ್ತು ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ (ಪಿಪಿಎ) ಇಬ್ಬರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.