ಆರೋಗ್ಯ ಸಮಸ್ಯೆ; ಚುನಾವಣಾ ಪ್ರಚಾರದಿಂದ ದೂರವುಳಿದ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಚೆನ್ನೈ: ಅನಾರೋಗ್ಯದ ಕಾರಣದಿಂದ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹೈಕಮಾಂಡ್‌ಗೆ ತಿಳಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಖುಷ್ಬೂ ಅವರು, ‘2019ರಲ್ಲಿ ಮೂಳೆ ಮುರಿತ ಅನುಭವಿಸಿದ್ದೆ, ಅದರ ನೋವು ಕಳೆದ ಐದು ವರ್ಷಗಳಿಂದ ನನ್ನನ್ನು ಕಾಡುತ್ತಿದೆ. ಹೀಗಾಗಿ ಹೆಚ್ಚು ಹೊತ್ತು ಕುಳಿತುಕೊಳ್ಳುವಂತಿಲ್ಲ, ಅಲ್ಲದೆ ದೂರದ ಪ್ರಯಾಣ ಮಾಡುವಂತಿಲ್ಲ, ಆದರೆ ಇವರೆಡು ಚುನಾವಣಾ ಪ್ರಚಾರ ಕಾರ್ಯಕ್ಕೆ ಮುಖ್ಯ. ಆದ್ದರಿಂದ ಈ ಬಾರಿಯ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿಲ್ಲ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಖುಷ್ಬೂ ಅವರು ವೈದ್ಯರ ಸಲಹೆಯ ಹೊರತಾಗಿಯೂ ಕೆಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಆರೋಗ್ಯ ಮತ್ತಷ್ಟು ಹದಗೆಡಲು ಕಾರಣವಾಗಿದೆ. ವೈದ್ಯರು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. , ' . . @BJP4India @ , . … ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.