ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ: ಅತಿಶಿ, ಸೌರಭ್ ಸೇರಿ ಹಲವರು ವಶಕ್ಕೆ ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಮತ್ತು ಬೆಂಬಲಿಗರು ಆಪ್ ಮತ್ತು ಬಿಜೆಪಿ ಪ್ರಧಾನ ಕಛೇರಿ ಬಳಿಯಿರುವ ಐಟಿಒ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರದೇಶದಲ್ಲಿ ಗುಂಪು ಸೇರುವುದನ್ನು ನಿಷೇಧಿಸಿ 144 ಸೆಕ್ಷನ್ ಜಾರಿಮಾಡಲಾಗಿದೆ. ಪ್ರತಿಭಟನಾ ನಿರತ ಸಚಿವರಾದ ಸೌರಭ್‌ ಭಾರದ್ವಾಜ್‌, ಅತಿಶಿ ಸೇರಿದಂತೆ ಹಲವು ಆಪ್‌ ನಾಯಕರನ್ನು ವಶಕ್ಕೆ ಪಡೆಯಲಾಗಿದೆ. | (@) ' .# ( - ://./n147TvqRQz) ../AfUY4nMk7s ಎಎಪಿ ಬೆಂಬಲಿಗರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎರಡೂ ಪಕ್ಷಗಳ ಪ್ರಧಾನ ಕಚೇರಿ ಇರುವ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ಸಂಚಾರಕ್ಕೆ ತಡೆಯೊಡ್ಡಿದ್ದಾರೆ. ಅಬಕಾರಿ ನೀತಿ ಪ್ರಕರಣ ಸಂಬಂಧ ಇ.ಡಿ ಗುರುವಾರ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಇವರ ಬಂಧನ ಖಂಡಿಸಿ ಎಎಪಿ ಇಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.