ಜಾರ್ಖಂಡ್ | ಅಲ್-ಖೈದಾದೊಂದಿಗೆ ಸಂಪರ್ಕ: 7 ಮಂದಿ ಬಂಧನ ರಾಂಚಿ(ಜಾರ್ಖಂಡ್): ಭಾರತ ಉಪಖಂಡದಲ್ಲಿ ಕಾರ್ಯಾಚರಿಸುತ್ತಿರುವ ಅಲ್-ಖೈದಾ ಸಂಘಟನೆಯೊಂದಿಗೆ () ಸಂಪರ್ಕ ಹೊಂದಿದ್ದ 7 ಜನರನ್ನು ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಗುರುವಾರ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಇಂದು ಮುಂಜಾನೆ ರಾಂಚಿ, ಹಜಾರಿಬಾಗ್ ಮತ್ತು ಲೋಹರ್ದಗಾ ಸೇರಿದಂತೆ ರಾಜ್ಯದ 14 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. 'ದಾಳಿ ಮುಂದುವರಿದಿದ್ದು, ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಸುಮಾರು 7 ಜನರನ್ನು ಈವರೆಗೆ ಬಂಧಿಸಲಾಗಿದೆ. ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲಾಗುತ್ತಿದೆ' ಎಂದು ಪೊಲೀಸ್ ವರಿಷ್ಠಾಧಿಕಾರಿ ರಿಷಬ್ ಝಾ ಪಿಟಿಐಗೆ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.