ಪುಣೆ-ದೆಹಲಿ ವಿಮಾನದಲ್ಲಿ ಕಾನ್‌ಸ್ಟೆಬಲ್‌ಗೆ ಕಚ್ಚಿದ ಮಹಿಳೆ! ನವದೆಹಲಿ: ಪುಣೆ ಮೂಲದ ಮಹಿಳೆಯೊಬ್ಬರು ಸಿಐಎಸ್‌ಎಫ್ ಕಾನ್‌ಸ್ಟೆಬಲ್‌ವೊಬ್ಬರಿಗೆ ಕಚ್ಚಿದ್ದು, ಸಹ ಪ್ರಯಾಣಿಕರಿಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಪುಣೆಯಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಸೀಟ್‌ ವಿಚಾರಕ್ಕೆ ಜಗಳ ನಡೆದಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ. ಆರೋಪಿ ಮಹಿಳೆಯನ್ನು ಸುರೇಖಾ ಸಿಂಗ್ ಎಂದು ಗುರುತಿಸಲಾಗಿದೆ. ಆಕೆ ಸಹ ಪ್ರಯಾಣಿಕರಾದ ಅನ್ವಿತಿಕಾ ಬೋರ್ಸೆ ಮತ್ತು ಆದಿತ್ಯ ಬೋರ್ಸೆ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.