ಲಂಡನ್: ಏರ್ ಇಂಡಿಯಾದ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ಕಿರುಕುಳ, ಹಲ್ಲೆ ನವದೆಹಲಿ/ಮುಂಬೈ: ಲಂಡನ್‌ನಲ್ಲಿ ಹೋಟೆಲ್‌ವೊಂದರಲ್ಲಿ ತಂಗಿದ್ದ ಏರ್ ಇಂಡಿಯಾದ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ, ದೂರು ದಾಖಲಿಸಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಈ ವಾರದ ಆರಂಭದಲ್ಲಿ ಲಂಡನ್‌ನ ಹೋಟೆಲ್‌ವೊಂದರಲ್ಲಿ ನಮ್ಮ ಸಿಬ್ಬಂದಿ ಉಳಿದುಕೊಂಡಿದ್ದರು. ಹೋಟೆಲ್‌ ಭದ್ರತೆಯನ್ನು ಬೇಧಿಸಿ ವ್ಯಕ್ತಿಯೊಬ್ಬ ಒಳಗೆ ಪ್ರವೇಶ ಮಾಡಿ ನಮ್ಮ ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಸಂಸ್ಥೆ ದೂರಿನಲ್ಲಿ ತಿಳಿಸಿದೆ. ಆ ವ್ಯಕ್ತಿ ನಮ್ಮ ಸಿಬ್ಬಂದಿ ಮೇಲೆ ಹಲ್ಲೆ ಮಾಡುತ್ತಿದ್ದಂತೆ ಅವರು ಕೂಗಿಕೊಂಡಿದ್ದಾರೆ. ತಕ್ಷಣಕ್ಕೆ ಕೆಲವರು ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಹಾಗೂ ಆರೋಪಿಯನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ. ಇಲ್ಲಿನ ಹೀಥ್ರೂ ವಿಮಾನ ನಿಲ್ದಾಣದ ಬಳಿಯ ಸ್ಟಾರ್ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.