ಮೋದಿ ಸರ್ಕಾರದ ದುರಾಡಳಿತದಿಂದ ಆರ್ಥಿಕ ಅಭಿವೃದ್ಧಿ 20 ವರ್ಷ ಹಿಂದಕ್ಕೆ: ಕಾಂಗ್ರೆಸ್ ನವದೆಹಲಿ: ಭಾರತವನ್ನು ಸಮೃದ್ಧಿಯ ಹಾದಿಯಲ್ಲಿ ಕೊಂಡೊಯ್ಯುವ ಬದಲು, ಪ್ರಧಾನಿಯವರ ತಪ್ಪು ನೀತಿ ಮತ್ತು ದುರಾಡಳಿತವು ದೇಶದ ಆರ್ಥಿಕ ಅಭಿವೃದ್ಧಿಯನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಆರ್ಥಿಕ ಬೆಳವಣಿಗೆ ಎಂದರೆ, ಕೃಷಿ, ಕೈಗಾರಿಕೆ ಹಾಗೂ ಸೇವಾ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸುವುದು. ಇದು ಎಲ್ಲಾ ದೇಶಗಳು ಅನುಸರಿಸುತ್ತಿರುವ ಕ್ರಮ. ಈ ದಿಸೆಯಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಸಾಧಿಸಿದ್ದ ಪ್ರಗತಿಯನ್ನು ನರೇಂದ್ರ ಮೋದಿ ಸರ್ಕಾರ ಹಿಮ್ಮುಖಗೊಳಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರತಿಪಾದಿಸಿದ್ದಾರೆ. वर्ष 2004-05 और 2017-18 के बीच भारत में कृषि श्रमिकों की संख्या में 6.7 करोड़ की गिरावट आई थी। ऐसा इसलिए हुआ क्योंकि श्रमिकों ने मैन्युफैक्चरिंग और सेवा क्षेत्र में ज़्यादा वेतन वाले कामों के लिए कम वेतन वाले कृषि क्षेत्र के काम को छोड़ा था। यह एक ऐतिहासिक उपलब्धि थी और भारत को… ‘2004-05 ಮತ್ತು 2017-18ರ ನಡುವೆ ಭಾರತದಲ್ಲಿ ಕೃಷಿ ಕಾರ್ಮಿಕರ ಸಂಖ್ಯೆ 6.7 ಕೋಟಿ ಕಡಿಮೆಯಾಗಿದೆ. ಏಕೆಂದರೆ ಕಾರ್ಮಿಕರು ಕಡಿಮೆ ವೇತನದ ಕೃಷಿಯನ್ನು ತೊರೆದು ಉತ್ಪಾದನೆ ಮತ್ತು ಸೇವೆಗಳಲ್ಲಿ ಹೆಚ್ಚಿನ ವೇತನದ ಉದ್ಯೋಗಗಳನ್ನು ಮಾಡುತ್ತಿದ್ದಾರೆ. ಇದೊಂದು ಐತಿಹಾಸಿಕ ಸಾಧನೆ ಮತ್ತು ಭಾರತವನ್ನು ಮಧ್ಯಮ ಆದಾಯದ ದೇಶವನ್ನಾಗಿ ಮಾಡುವಲ್ಲಿ ಮಹತ್ವದ ಕೊಡುಗೆಯಾಗಿದೆ' ಎಂದು ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಡಾ.ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ದೇಶವು ಸಾಧಿಸಿದ ಸಾಧನೆ ಮತ್ತು ಪ್ರಗತಿ, ಪ್ರಧಾನಿ ಮೋದಿಯವರ ಅನ್ಯಾಯ ಕಾಲದ ಮೂರು ವರ್ಷಗಳಲ್ಲಿ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎಂದು ರಮೇಶ್ ಆರೋಪಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.