ಲಡಾಖ್‌ನಲ್ಲಿ ಭೂಕಂಪ: 5.2 ತೀವ್ರತೆ ದಾಖಲು ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಮಂಗಳವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್‌) ತಿಳಿಸಿದೆ. ಕಾರ್ಗಿಲ್‌ನ ವಾಯವ್ಯಕ್ಕೆ 148 ಕಿಮೀ ದೂರದಲ್ಲಿ ಕಂಪನದ ಆಳವು ಭೂಮಿಯ ಮೇಲ್ಮೈಯಿಂದ 10 ಕಿ.ಮೀ ಕೆಳಗೆ ದಾಖಲಾಗಿದೆ. ಭೂಕಂಪನದ ಹೊರತಾಗಿಯೂ, ಯಾವುದೇ ಹಾನಿಯ ಬಗ್ಗೆ ವರದಿಗಳು ಬಂದಿಲ್ಲ. 5.2 ' @ | ://./TFF3StG8T8# # # ../6Av71MAYKh ಮಂಗಳವಾರ ಜಮ್ಮುವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11.30ಕ್ಕೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಲಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.