ಪ್ರಧಾನಿ ಮೋದಿ ಭೇಟಿ ಮಾಡಿದ ಅಮರಿಂದರ್ ಸಿಂಗ್: ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಪಂಜಾಬ್‌ಗೆ ಸಂಬಂಧಿಸಿದ ವಿಷಯಗಳು ಸೇರಿದಂತೆ ರೈತರ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆಯಡಿ ಬೇಳೆಕಾಳು, ಗೋಧಿ, ಹತ್ತಿಯನ್ನು ಸರ್ಕಾರಿ ಸಂಸ್ಥೆಗಳ ಮೂಲಕ ಖರೀದಿಸಲು ರೈತರ ಜೊತೆ ಐದು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳುವ ಪ್ರಸ್ತಾವವನ್ನು ಮೂವರು ಸಚಿವರ ಸಮಿತಿ ಸೋಮವಾರ ಪ್ರತಿಭಟನಾನಿರತ ರೈತರ ಮುಂದಿಟ್ಟಿತ್ತು. ಆದರೆ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತ ಮುಖಂಡರು ಈ ಪ್ರಸ್ತಾವವನ್ನು ತಿರಸ್ಕರಿಸಿದ್ದಾರೆ. ಅಲ್ಲದೆ ಶಾಂತಿಯುತವಾಗಿ ಪ್ರತಿಭಟನೆ ಮುಂದುವರಿಸುವುದಾಗಿಯೂ ಮಂಗಳವಾರ ತಿಳಿಸಿದ್ದಾರೆ. ' @ . ../qJhQxA4BVJ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.