ಚಂಡೀಗಢ: ಮೇಯರ್ ಮನೋಜ್‌ ಸೋನ್‌ಕರ್ ರಾಜೀನಾಮೆ ಚಂಡೀಗಢ: ಚಂಡೀಗಢದ ನೂತನ ಮೇಯರ್ ಮನೋಜ್‌ ಸೋನ್‌ಕರ್ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ. ಜನವರಿ 30ರಂದು ನಡೆದ ಮೇಯರ್‌ ಚುನಾವಣೆಯಲ್ಲಿ ಅಕ್ರಮ ನಡೆದಿರುವ ಕುರಿತು ಆರೋಪಗಳು ಕೇಳಿಬಂದಿದ್ದವು. ಅಲ್ಲದೇ, ಈ ವಿಚಾರವಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ನಡೆಯಲಿದೆ. ಕಾಂಗ್ರೆಸ್‌–ಎಎಪಿ ಮೈತ್ರಿ ಮಾಡಿಕೊಂಡಿದ್ದರೂ, ಬಿಜೆಪಿ ಅಭ್ಯರ್ಥಿಯಾಗಿದ್ದ ಮನೋಜ್‌ ಸೋನ್‌ಕರ್ ಆಯ್ಕೆಯಾಗಿದ್ದರು. ‘ಪಕ್ಷಗಳು ನೇಮಿಸಿದ್ದ ಸದಸ್ಯರಿಗೆ ಮತ ಎಣಿಕೆ ಪ್ರಕ್ರಿಯೆಯನ್ನು ಗಮನಿಸಿಕೊಳ್ಳಲು ಚುನಾವಣಾಧಿಕಾರಿ ಅವಕಾಶ ನೀಡಿರಲಿಲ್ಲ’ ಎಂದು ಆರೋಪಿಸಿ ಎಎಪಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.