ಸಂದೇಶ್‌ಖಾಲಿ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆ ನವದೆಹಲಿ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಕುರಿತು ಕೋರ್ಟ್‌ ಮೇಲುಸ್ತುವಾರಿಯಲ್ಲಿ ಸಿಬಿಐ ಅಥವಾ ವಿಶೇಷ ತನಿಖಾ ತಂಡದಿಂದ ರಾಜ್ಯದ ಹೊರಗೆ, ದೆಹಲಿಯಲ್ಲಿ ವಿಚಾರಣೆ ನಡೆಸಬೇಕು ಎಂದು ನಿರ್ದೇಶಿಸಲು ಕೋರಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರಿರುವ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಲಿದೆ. ವಕೀಲ್ ಅಲಾಕ್‌ ಅಲೋಕ್ ಶ್ರೀವಾತ್ಸವ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಮಣಿಪುರ ಪ್ರಕರಣಗಳ ತನಿಖೆ ಮೇಲುಸ್ತುವಾರಿಗೆ ರಚಿಸುರುವಂತೆ, ಹೈಕೋರ್ಟ್‌ನ ಮೂವರು ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ರಚಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.