ಭಾರತ–ಚೀನಾ ವಿದೇಶಾಂಗ ಸಚಿವರ ಭೇಟಿ, ಚರ್ಚೆ ಬೀಜಿಂಗ್‌/ಮ್ಯೂನಿಚ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಜರ್ಮನಿಯಲ್ಲಿ ಭೇಟಿಯಾಗಿ ಚರ್ಚಿಸಿದರು. ಕಳೆದ ಆರು ತಿಂಗಳಲ್ಲಿ ಇದು ಉಭಯತ್ರರ ಮೊದಲ ಭೇಟಿಯಾಗಿದೆ. ಮ್ಯೂನಿಚ್‌ನಲ್ಲಿ ನಡೆಯುತ್ತಿರುವ ಭದ್ರತಾ ಸಮ್ಮೇಳನದ ಸಂದರ್ಭದಲ್ಲಿ ಈ ಭೇಟಿ ನಡೆಯಿತು. ಈ ಭೇಟಿ ಕುರಿತು ಭಾರತ ಮತ್ತು ಚೀನಾ ಸರ್ಕಾರ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಉಭಯತ್ರರು ಆರು ತಿಂಗಳ ಹಿಂದೆ ಜಕಾರ್ತಾದಲ್ಲಿ ನಡೆದ ಆಸಿಯಾನ್ ಪ್ರಾದೇಶಿಕ ವೇದಿಕೆ ಸಭೆಯ ಸಂದರ್ಭದಲ್ಲಿ ಭೇಟಿಯಾಗಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.