ಉತ್ತರಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರು ಸಾವು ಕೌಶಾಂಬಿ: ಉತ್ತರ ಪ್ರದೇಶದ ಕೌಶಾಂಬಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ (ಇಂದು) ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಕೌಶಾಂಬಿಯ ಭರ್ವಾರಿ ಪಟ್ಟಣದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ' @ | ://./bM7XBItdtT# # # ../ichy7UHSUc 'ಅವಘಡದಲ್ಲಿ 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆ ವಸತಿ ಪ್ರದೇಶದಿಂದ ದೂರದಲ್ಲಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ' ಎಂದು ಪೊಲೀಸ್‌ ವರಿಷ್ಠಾಧಿಕಾರಿ ಬ್ರಿಜೇಶ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ. # कौशांबी: बृजेश कुमार श्रीवास्तव ने कहा, "एक पटाखा फैक्ट्री में आग लगी है और हादसे में 4 लोगों की मृत्यु हुई है। कुछ घायल हुए हैं, जिन्हें अस्पताल में भर्ती कराया गया है। बचाव अभियान जारी है..." ://./FdqsqTg78g ../1JqCoxFniH ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.