ತಮಿಳುನಾಡು: ವಿರುಧ್‌ನಗರ ಪಟಾಕಿ ಕಾರ್ಖಾನೆ ದುರಂತ– ಮೃತರ ಸಂಖ್ಯೆ 10ಕ್ಕೆ ಏರಿಕೆ ವಿರುಧ್‌ನಗರ, ತಮಿಳುನಾಡು: ತಮಿಳುನಾಡಿನ ವಿರುಧ್‌ನಗರ ಜಿಲ್ಲೆಯಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಹಾಗೂ ಆರು ಪುರುಷರು ಇದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ. ವೆಂಬಾಕೊಟ್ಟೈ ತಾಲ್ಲೂಕಿನ ಕುಂಡಾಯಿರುಪ್ಪು ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಬೆಳಿಗ್ಗೆ ಏಕಾಏಕಿ ಸ್ಪೋಟ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮಿಳುನಾಡು ಸರ್ಕಾರ ಮೃತರಿಗೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಸ್ಥಳದಲ್ಲಿ ಭಾರಿ ಪ್ರಮಾಣದ ರಸಾಯನಿಕಗಳನ್ನು ಸಂಗ್ರಹಿಸಲಾಗಿದ್ದು ತಿಳಿದು ಬಂದಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.