| ರಾಜ್ಯಸಭಾ ಚುನಾವಣೆ: ರಾಜಸ್ಥಾನದಿಂದ ಸೋನಿಯಾಗಾಂಧಿ ಕಣಕ್ಕೆ ರಾಜ್ಯಸಭೆ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ರಾಜಸ್ಥಾನದಿಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕಣಕ್ಕಿಳಿಯಲಿದ್ದು, ಬಿಹಾರದಿಂದ ಡಾ.ಅಖೀಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ. ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಕಣಕ್ಕಿಳಿಯಲಿದ್ದಾರೆ. ಫೆ.27 ರಂದು ಒಟ್ಟು 15 ರಾಜ್ಯಗಳ 56 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.