ಎನ್‌ಸಿಪಿ ಅಜಿತ್ ಪವಾರ್ ಬಣದಿಂದ ಪ್ರಫುಲ್ ಪಟೇಲ್‌ಗೆ ರಾಜ್ಯಸಭೆ ಟಿಕೆಟ್ ಮುಂಬೈ: ಮಹಾರಾಷ್ಟ್ರದಲ್ಲಿ ಡಿಸಿಎಂ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣದಿಂದ ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್ ಅವರನ್ನು ರಾಜ್ಯಸಭಾ ಚುನಾವಣಾ ಅಖಾಡಕ್ಕೆ ಇಳಿಸಲಾಗಿದೆ. ಎನ್‌ಸಿಪಿ ಅಜಿತ್ ಪವಾರ್ ಬಣದ ಮುಖ್ಯಸ್ಥ ಸುನೀಲ್ ತತ್ಕರೆ ಅವರು ಈ ವಿಷಯವನ್ನು ಬುಧವಾರ ತಿಳಿಸಿದ್ದಾರೆ. ಶರದ್ ಪವಾರ್ ಅವರ ಎನ್‌ಸಿಪಿ ಎರಡು ಹೋಳಾದ ನಂತರ ಅಜಿತ್ ಪವಾರ್ ಅವರ ಜೊತೆ ಪ್ರಫುಲ್ ಪಟೇಲ್ ಅವರು ಗುರುತಿಸಿಕೊಂಡಿದ್ದಾರೆ. ಅವರು 2014ರಿಂದ ರಾಜ್ಯಸಭೆ ಸದಸ್ಯರಾಗಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.