ಬಿಲ್ಕಿಸ್ ಬಾನು ಪ್ರಕರಣ: ‘ಸುಪ್ರೀಂ’ ಮೊರೆ ಹೋದ ಗುಜರಾತ್‌ ಸರ್ಕಾರ ನವದೆಹಲಿ: ಬಿಲ್ಕಿಸ್ ಬಾನು ಪ್ರಕರಣದಲ್ಲಿ 11 ಮಂದಿ ಅಪರಾಧಿಗಳಿಗೆ ನೀಡಲಾಗಿದ್ದ ಕ್ಷಮಾದಾನವನ್ನು ರದ್ದುಗೊಳಿಸಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಗುಜರಾತ್‌ ಸರ್ಕಾರ, ಸುಪ್ರೀಂ ಕೋರ್ಟ್ ಮೊರೆಹೋಗಿದೆ. ಬಿಲ್ಕಿಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅವರ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದ ಪ್ರಕರಣದ ಅಪರಾಧಿಗಳಿಗೆ ಕ್ಷಮಾದಾನ ನೀಡಿದ್ದ ಗುಜರಾತ್ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಎಲ್ಲ 11 ಅಪರಾಧಿಗಳು ಮತ್ತೆ ಜೈಲು ಸೇರಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.