ಸಚಿವ ಸ್ಥಾನಕ್ಕೆ ಸೆಂಥಿಲ್‌ ಬಾಲಾಜಿ ರಾಜೀನಾಮೆ ಚೆನ್ನೈ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಯದ (ಇ.ಡಿ) ಬಂಧನದಲ್ಲಿರುವ ತಮಿಳುನಾಡಿನ ಸಚಿವ ವಿ.ಸೆಂಥಿಲ್‌ ಬಾಲಾಜಿ ಅವರು ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌ ವಿಚಾರಣೆಗೆ ಕೈಗೆತ್ತಿಕೊಳ್ಳುವ ಎರಡು ದಿನಗಳ ಮುನ್ನ ಈ ಬೆಳವಣಿಗೆ ನಡೆದಿದೆ. ಬಾಲಾಜಿ ಅವರನ್ನು ಇ.ಡಿ ಅಧಿಕಾರಿಗಳು ಕಳೆದ ವರ್ಷ ಜೂನ್‌ 14 ರಂದು ಬಂಧಿಸಿದ್ದರು. ಅವರು ಎಂ.ಕೆ.ಸ್ಟಾಲಿನ್‌ ಸಂಪುಟದಲ್ಲಿ ಕಳೆದ ಎಂಟು ತಿಂಗಳುಗಳಿಂದ ಖಾತೆರಹಿತ ಸಚಿವರಾಗಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.