ಫೆ.12ಕ್ಕೆ ಒಂದು ಲಕ್ಷ ಮಂದಿಗೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ ಆಯ್ಕೆಯಾಗಿರುವ 1 ಲಕ್ಷಕ್ಕೂ ಹೆಚ್ಚು ಮಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಫೆ.12ರಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಇಲ್ಲಿ ನಿರ್ಮಾಣವಾಗಲಿರುವ ‘ಕರ್ಮಯೋಗಿ ಭವನ’ದ ಮೊದಲನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ತಿಳಿಸಿದೆ. ದೇಶದಾದ್ಯಂತ 47 ಕಡೆಗಳಲ್ಲಿ ಉದ್ಯೋಗ ಮೇಳ ನಡೆಯಲಿದೆ. ಕಂದಾಯ, ಗೃಹ ವ್ಯವಹಾರ, ಉನ್ನತ ಶಿಕ್ಷಣ, ಪ್ರಾಥಮಿಕ ಶಿಕ್ಷಣ. ರಕ್ಷಣೆ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಆಯ್ಕೆಯಾದವರು ಇದರಲ್ಲಿ ಸೇರಿದ್ದಾರೆ ಎಂದು ಅದು ತಿಳಿಸಿದೆ. ಉದ್ಯೋಗ ಮೇಳವು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.