ಪಶ್ಚಿಮ ಬಂಗಾಳ | ರಸ್ತೆ ಅಪಘಾತದಲ್ಲಿ 4 ಸಾವು, 15 ಮಂದಿಗೆ ಗಾಯ ರಾಯ್‌ಗಂಜ್: ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೇಗವಾಗಿ ಬಂದ ಟ್ರಕ್ ಎರಡು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಬುಧವಾರ ತಡರಾತ್ರಿ ಕರಂದಿಘಿಯ ರಾಷ್ಟ್ರೀಯ ಹೆದ್ದಾರಿ 12ರಲ್ಲಿ ತುಂಗಿದಿಘಿ ಬಸ್ ನಿಲ್ದಾಣದ ಸಮೀಪ ಅಪಘಾತ ಸಂಭವಿಸಿದೆ. ಗಾಯಾಳುಗಳಿಗೆ ರಾಜ್‌ಗಂಜ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಟ್ರಕ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.