ಮಹಾರಾಷ್ಟ್ರ: ಕಾಂಗ್ರೆಸ್‌ ಪಕ್ಷ ತೊರೆದ ಹಿರಿಯ ನಾಯಕ ಬಾಬಾ ಸಿದ್ದಿಕಿ ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್‌ನ ಹಿರಿಯ ನಾಯಕ ಬಾಬಾ ಸಿದ್ದಿಕಿ ಅವರು ಪಕ್ಷ ತೊರೆದಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡ ಅವರು, ‘ನಾನು ಹದಿಹರೆಯದವನಾಗಿದ್ದಾಗ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡೆ. ಇದು 48 ವರ್ಷಗಳ ಕಾಲ ಮಹತ್ವದ ಪ್ರಯಾಣವಾಗಿದೆ. ಈ ಕ್ಷಣದಿಂದಲೇ ಅನ್ವಯವಾಗುವಂತೆ ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ಹೇಳಲು ಬಹಳಷ್ಟು ಇದೆ. ಆದರೆ ಕೆಲವು ವಿಷಯಗಳನ್ನು ಹೇಳದೆ ಬಿಡುವುದು ಉತ್ತಮ. ಈ ಪ್ರಯಾಣದ ಭಾಗವಾಗಿರುವ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ’ ಎಂದು ಬರೆದುಕೊಂಡಿದ್ದಾರೆ. 48 . @ . ’ … ಬಾಬಾ ಜಿಯಾವುದ್ದೀನ್ ಸಿದ್ದಿಕ್ (ಬಾಬಾ ಸಿದ್ದಿಕಿ) ಅವರು ವಂಡ್ರೆ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ‌ ಮಹಾರಾಷ್ಟ್ರ ವಿಧಾನಸಭೆಯ ಸದಸ್ಯರಾಗಿದ್ದರು. ಕಾಂಗ್ರೆಸ್‌ ತೊರೆದ ಸಿದ್ದಿಕಿ ಅವರು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಸೇರುವ ಸಾಧ್ಯತೆಯಿದೆ ಎನ್ನಲಾಗಿದೆ. 2024 ರ ಲೋಕಸಭಾ ಚುನಾವಣೆಗೆ ಮೊದಲು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ತೊರೆದ ಎರಡನೇ ನಾಯಕ ಇವರು. ಕಳೆದ ತಿಂಗಳು, ಮಿಲಿಂದ್ ದಿಯೋರಾ ಕಾಂಗ್ರೆಸ್‌ ತೊರೆದು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ‍ಪಕ್ಷ ಸೇರಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.