ಉತ್ತರಪ್ರದೇಶ ‘ಬಿಮಾರು’ ರಾಜ್ಯವಲ್ಲ: ಯೋಗಿ ಆದಿತ್ಯನಾಥ ಲಖನೌ: ರಾಜಕೀಯ ಕಾರಣಗಳಿಂದ ಉತ್ತರಪ್ರದೇಶವನ್ನು ‘ಬಿಮಾರು’ ರಾಜ್ಯವೆಂದು ಬಿಂಬಿಸಲಾಗುತ್ತಿದೆ. ರಾಜ್ಯವು ಈಗ ಈ ಶ್ರೇಣಿಯನ್ನು ಮೀರಿ ಬೆಳೆದಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಗುರುವಾರ ಹೇಳಿದರು. ರಾಜ್ಯವು ಈಗ ದೇಶದಲ್ಲಿ ಎರಡನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದಿದೆ ಎಂದು ಪ್ರತಿಪಾದಿಸಿದರು. ಬಿಮಾರು’ () ಸಂಕ್ಷಿಪ್ತ ಪದವನ್ನು ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಉತ್ತರಪ್ರದೇಶ ರಾಜ್ಯಗಳನ್ನು ಉಲ್ಲೇಖಿಸಲು ಬಳಸಲಾಗುತ್ತಿದೆ. ಈ ರಾಜ್ಯಗಳು ಆರ್ಥಿಕ ಬೆಳವಣಿಗೆ, ಆರೋಗ್ಯ, ಶಿಕ್ಷಣ ಮತ್ತು ಇತರ ಕ್ಷೇತ್ರಗಳಲ್ಲಿ ಹಿಂದುಳಿದಿವೆ ಎಂಬುದನ್ನು ಇದು ಸೂಚಿಸುತ್ತದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.