ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಅಂಜಾರಿಯಾ ಹೆಸರು ಶಿಫಾರಸು ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಗುಜರಾತ್ ಹೈಕೋರ್ಟ್‌ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದೆ. ಕರ್ನಾಟಕ ಹೈಕೋರ್ಟ್‌ನ ಈಗಿನ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರು ಫೆಬ್ರುವರಿ 24ರಂದು ನಿವೃತ್ತರಾಗಲಿದ್ದಾರೆ. ನ್ಯಾಯಮೂರ್ತಿ ಕುಮಾರ್ ಅವರ ನಿವೃತ್ತಿಯ ದಿನದಿಂದ ಅನ್ವಯವಾಗುವಂತೆ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ಮುಖ್ಯ ನ್ಯಾಯಮೂರ್ತಿ ಆಗಿ ನೇಮಿಸಲು ಕೊಲಿಜಿಯಂ ಶಿಫಾರಸು ಮಾಡಿದೆ. ಅಂಜಾರಿಯಾ ಅವರು 2011ರಿಂದ ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.