ಪ್ರಧಾನಿ ಮೋದಿ ಭಾಷಣದ ಬಗ್ಗೆ ಕಾಂಗ್ರೆಸ್‌ ಕಿಡಿ: # ಟ್ರೆಂಡಿಂಗ್‌ ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 370 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ನೀವು ಹೇಳಿದಷ್ಟು ಸ್ಥಾನಗಳನ್ನು ಪಡೆಯದಿದ್ದರೆ ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸುತ್ತೀರಾ? ಎಂದು ಪ್ರಶ್ನಿಸಿದೆ. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ವಿರುದ್ದ ಮಾಡಿರುವ ಟೀಕೆಗಳನ್ನು ಪಕ್ಷ ಕಟುವಾಗಿ ಟೀಕಿಸಿದೆ. ಕಾಂಗ್ರೆಸ್ ಪಕ್ಷದ ಹೆಸರು ಹೇಳದೆ ಪ್ರಧಾನಿಗೆ ನಿದ್ದೆ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ‘ನಮ್ಮ ನಾಯಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ನಾನು ಮೋದಿ ಅವರನ್ನು ಕೇಳಲು ಬಯಸುತ್ತೇನೆ. ನಿಮ್ಮ ಪಕ್ಷದಿಂದ ಅಥವಾ ನಿಮ್ಮ ರಾಜಕೀಯ ವಂಶಸ್ಥರು ದೇಶದ ಸ್ವಾತಂತ್ರ್ಯ, ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆಯೇ?' ಎಂದು ಖರ್ಗೆ 'ಎಕ್ಸ್' ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. प्रधानमंत्री जी को कांग्रेस का नाम लिए बिना नींद नहीं आती। वो परिवारवाद के बारे में बोले, हमारे नेताओं ने देश के लिए जान दी है। मैं पूछना चाहता हूँ मोदी जी से — आपकी पार्टी या आपके राजनीति वंशजों में से किसने देश की आज़ादी, एकता व अखंडता के लिए अपनी जान दी है ? ../ ‘ಪ್ರಧಾನಿ ಮೋದಿ ತಾನು ಒಬಿಸಿ ನಾಯಕ ಎಂದು ಹೆಮ್ಮೆ ಪಡುತ್ತಾರೆ. ಆದರೆ ಕೇಂದ್ರ ಸರ್ಕಾರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಒಬಿಸಿಗಳ ಪ್ರಾತಿನಿಧ್ಯ ತೀರಾ ಕಡಿಮೆಯಿದೆ. ಮೋದಿ ಅವರು ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸುವ ಬೇಡಿಕೆಯನ್ನು ತಳ್ಳಿಹಾಕಿದರು. ಅದು ಎಲ್ಲಾ ಸಂಸ್ಥೆಗಳಲ್ಲಿ ಈ ಕಡಿಮೆ ಪ್ರಾತಿನಿಧ್ಯದ ವಾಸ್ತವತೆಯನ್ನು ಬಹಿರಂಗಪಡಿಸುತ್ತದೆ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ. ‘ ’, - , . , … ಸಾಮಾಜಿಕ ನ್ಯಾಯದ ವಿಷಯವನ್ನು ಪ್ರಧಾನಿ ಏಕೆ ತಿರಸ್ಕರಿಸುತ್ತಾರೆ?. ಸತ್ಯ ಹೇಳಬೇಕೆಂದರೆ ಆರ್‌ಎಸ್‌ಎಸ್‌ನ ಜಾತಿವಾದಿ ಮನಸ್ಥಿತಿಯಲ್ಲಿ ತರಬೇತಿ ಪಡೆದವರು ಎಂದಿಗೂ ಸಾಮಾಜಿಕ ನ್ಯಾಯವನ್ನು ನೀಡಲು ಸಾಧ್ಯವಿಲ್ಲ ಎಂದು ವೇಣುಗೋಪಾಲ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ಶಶಿ ತರೂರ್ ಮಾತನಾಡಿ, ಪ್ರಧಾನಿಯವರು ಕಾಂಗ್ರೆಸ್ ಅನ್ನು ಗುರಿಯಾಗಿಸಿದ್ದಾರೆ. ಅವರು ನಮ್ಮ ಬಗ್ಗೆ ಎಷ್ಟು ಚಿಂತಿತರಾಗಿದ್ದಾರೆಂದರೆ, ಅವರು ತಮ್ಮ ಇಡೀ ಭಾಷಣವನ್ನು ಕಾಂಗ್ರೆಸ್‌ಗೆ ಮೀಸಲಿಟ್ಟಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಬಿಜೆಪಿ 370ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆದರೆ ಮೋದಿ ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸುತ್ತಾರೆಯೇ? ಎಂದು ಕಾಂಗ್ರೆಸ್ ನಾಯಕ ಮಾಣಿಕ್ಯಂ ಟ್ಯಾಗೋರ್ ಪ್ರಶ್ನಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ‘ಪ್ರಧಾನಿಯಾಗಿ ಸಂಸತ್ತಿನಲ್ಲಿ ಮೋದಿ ಅವರ ಕೊನೆಯ ಭಾಷಣ ಇಂದು ಎಂದು ದೇಶದ ಯುವಕರು ಹೇಳುತ್ತಿದ್ದಾರೆ .# ನಂಬರ್‌ 1ನಲ್ಲಿ ಟ್ರೆಂಡಿಂಗ್‌ನಲ್ಲಿದೆ. ಜನರು ಈಗ ನಿಮ್ಮ ಹೇಳಿಕೆಗಳನ್ನು ಕೇಳಲು ಬೇಸತ್ತಿದ್ದಾರೆ. 'ಮೋದಾನಿ' ಯುಗ ಕೊನೆಗೊಳ್ಳಲಿದೆ' ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ . देश के युवा कह रहे हैं की मोदी जी का आज संसद में प्रधानमंत्री के तौर पर आख़िरी भाषण था। # नंबर 1 पर ट्रेंड कर रहा है। अब लोग आपके जुमले सुन सुन कर थक गए हैं। मोदानी का दौर जाने वाला है। ಬಿಜೆಪಿ ನೇತೃತ್ವದ ಎನ್‌ಡಿಎ ಭಾರಿ ಬಹುಮತದೊಂದಿಗೆ ಕೇಂದ್ರದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದರು. ರಾಷ್ಟ್ರಪತಿಯವರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರವಾಗಿ ಲೋಕಸಭೆಯಲ್ಲಿ ಸೋಮವಾರ ಭಾಷಣ ಮಾಡಿದ ಅವರು, ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು 370ಕ್ಕೂ ಅಧಿಕ ಸ್ಥಾನಗಳನ್ನು ಹಾಗೂ ಎನ್‌ಡಿಎ ಮೈತ್ರಿಕೂಟವು 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ’ ಎಂಬ ಭರವಸೆಯ ಮಾತು ಗಳನ್ನಾಡಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.