ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ ನವದೆಹಲಿ: ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬರ ಮೃತದೇಹ ಅದೇ ಕಾಲೇಜಿನ ಹಾಸ್ಟೆಲ್‌ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಸೋಮವಾರ ಮಧ್ಯಾಹ್ನ ಕೋಣೆಯ ಬಾಗಿಲು ಮುರಿದು ನೋಡಿದಾಗ ಯುವತಿಯ ಮೃತದೇಹ ಕಂಡು ಬಂದಿದೆ. ಇದೊಂದು ಆತ್ಮಹತ್ಯೆ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ ಎಂದು ಹೇಳಿದ್ದಾರೆ. ಕುಟುಂಬದವರ ಮನವಿ ಮೇರೆಗೆ ಯುವತಿಯ ಹೆಸರು ಹಾಗೂ ವಿಳಾಸವನ್ನು ಬಹಿರಂಗಪಡಿಸಲಾಗಿಲ್ಲ. ಭಾನುವಾರ ರಾತ್ರಿ ಸ್ನೇಹಿತರ ಜೊತೆ ಊಟಕ್ಕೆ ಹೋಗಿ ಬಂದಿದ್ದ ಯುವತಿ, ಹಾಸ್ಟೆಲ್‌ ಕೋಣೆಗೆ ಹೋಗಿ ಬಾಗಿಲನ್ನು ಒಳಗಿನಿಂದ ಬಂದ್ ಮಾಡಿಕೊಂಡಿದ್ದರು ಎಂಬುದು ಗೊತ್ತಾಗಿದೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿನಿ ಕಾಲೇಜಿನಲ್ಲಿ ಅಥವಾ ಕುಟುಂಬದಲ್ಲಿ ಯಾವುದೇ ಶತ್ರುತ್ವ ಹೊಂದಿರಲಿಲ್ಲ. ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.