ಛತ್ತೀಸ್‌ಗಢ: ನಕ್ಸಲರಿಂದ ಇಬ್ಬರು ನಾಗರೀಕರ ಹತ್ಯೆ ರಾಯಪುರ: ಛತ್ತೀಸ್‌ಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ನಾಗರೀಕರನ್ನು ನಕ್ಸಲೀಯರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ದುಲ್ಹೇದ್ ಗ್ರಾಮದ ನಿವಾಸಿಗಳಾದ ಸೋಧಿ ಮತ್ತು ನಂದಾ ಎಂದು ಗುರುತಿಸಲಾಗಿದೆ. ಚಿಂತಗುಫಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ಇನ್ನು ಮುಂದೆ ಕೊಲೆಗಳನ್ನು ಮಾಡಲಾಗುವುದು ಎಂದು ನಕ್ಸಲರು ಎಚ್ಚರಿಕೆ ನೀಡಿದ್ದರಿಂದ ಅಲ್ಲಿಗೆ ಭದ್ರತಾ ಹಾಗೂ ಪೊಲೀಸ್‌ ತಂಡಗಳನ್ನು ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ತಮ್ಮ ನೆಲೆಗಳನ್ನು ಕಳೆದುಕೊಂಡು ಹತಾಶರಾಗಿರುವ ನಕ್ಸಲೀಯರು ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಂಡಿದ್ದಾರೆ. ಸರ್ಕಾರದ ಅಭಿವೃದ್ಧಿ ಮತ್ತು ಕಲ್ಯಾಣ ಯೋಜನೆಗಳು ಸಾಮಾನ್ಯ ಜನರನ್ನು ತಲುಪುವುದನ್ನು ಅವರು ಬಯಸುತ್ತಿಲ್ಲ, ಆದ್ದರಿಂದ ಇಂತಹ ಕೃತ್ಯಗಳಿಗೆ ಇಳಿದಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.