ಶತಕಗಳ ಅರ್ಧ ಶತಕ: ಕೊಹ್ಲಿ ಸಾಧನೆಗೆ ಮೋದಿ ಅಭಿನಂದನೆ ನವದೆಹಲಿ: ಏಕದಿನ ಕ್ರಿಕೆಟ್‌ನಲ್ಲಿ ವಿಶ್ವದಾಖಲೆಯ 50ನೇ ಶತಕ ಗಳಿಸಿದ ವಿರಾಟ್ ಕೊಹ್ಲಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ವಿರಾಟ್‌ ಕೊಹ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ 49 ಶತಕಗಳ ದಾಖಲೆಯನ್ನು ಹಿಂದಿಕ್ಕಿ ಏಕದಿನ ಕ್ರಿಕೆಟ್‌ನಲ್ಲಿ 50ನೇ ಶತಕ ಪೂರೈಸಿದ ಮೊದಲ ಆಟಗಾರ ಎಂಬ ದಾಖಲೆ ಬರೆದರು. ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಮತ್ತು 50+ ಸ್ಕೋರ್‌ಗಳ ದಾಖಲೆಯಲ್ಲೂ ತೆಂಡೂಲ್ಕರ್ ಅವರನ್ನು ಕೊಹ್ಲಿ ಹಿಂದಿಕ್ಕಿದರು. ಕೊಹ್ಲಿ ಅವರ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ವಿರಾಟ್ ಕೊಹ್ಲಿ ತಮ್ಮ 50ನೇ ಶತಕಗಳಿಸಿರುವುದು ಮಾತ್ರವಲ್ಲದೇ ಅವರು ಶ್ರೇಷ್ಠತೆ, ಪರಿಶ್ರಮ ಹಾಗೂ ಅತ್ಯುತ್ತಮ ಕ್ರೀಡಾ ಮನೋಭಾವ ತೋರಿದ್ದಾರೆ . ಈ ಮೈಲುಗಲ್ಲು ಅವರ ನಿರಂತರ ಸಮರ್ಪಣೆ ಮತ್ತು ಅಸಾಧಾರಣ ಪ್ರತಿಭೆಗೆ ಸಾಕ್ಷಿಯಾಗಿದೆ. ನಾನು ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವರು ಮುಂದಿನ ಪೀಳಿಗೆಗೆ ಬೆಂಚ್ಮಾರ್ಕ್ ಸ್ಥಾಪಿಸುವುದನ್ನು ಮುಂದುವರಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್‌‘ ಮಾಡಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ನಿನ್ನೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಸೆಮಿಫೈನಲ್‌ನಲ್ಲಿ 70 ರನ್‌ಗಳಿಂದ ವೀರೋಚಿತ ಹೋರಾಟ ಪ್ರದರ್ಶಿಸಿದ ‘ಹಾಲಿ ರನ್ನರ್ಸ್‌ ಅಪ್’ ನ್ಯೂಜಿಲೆಂಡ್ ವಿರುದ್ಧ ಜಯಭೇರಿ ಬಾರಿಸಿತು. ಆತಿಥೇಯ ತಂಡವು ನೀಡಿದ್ದ 398 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಕಿವೀಸ್ ಬಳಗಕ್ಕೆ 48.5 ಓವರ್‌ಗಳಲ್ಲಿ 327 ರನ್‌ ಗಳಿಸಲಷ್ಟೇ ಸಾಧ್ಯವಾಯಿತು. ಏಕದಿನ ಕ್ರಿಕೆಟ್‌ನಲ್ಲಿ ವಿಶ್ವದಾಖಲೆಯ 50ನೇ ಶತಕಗಳಿಸಿದರು. ಅವರು ಈ ಪಂದ್ಯದಲ್ಲಿ 106 ಎಸೆತಗಳಲ್ಲಿ ಶತಕ ಪೂರೈಸಿದರು. ನಂತರ 117 ರನ್ ಗಳಿಸಿದ್ದ ಕೊಹ್ಲಿ ಟಿಮ್ ಸೌಥಿ ಎಸೆತದಲ್ಲಿ ಡೆವೊನ್ ಕಾನ್ವೆಗೆ ಕ್ಯಾಚ್ ನೀಡಿ ಔಟಾದರು. , @ 50th . . … ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.